Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:1 - ಕನ್ನಡ ಸಮಕಾಲಿಕ ಅನುವಾದ

1 “ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಫಿಲಿಷ್ಟಿಯರು ಕೆಯೀಲಾಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿರುವ ವರ್ತಮಾನವು ದಾವೀದನಿಗೆ ಮುಟ್ಟಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ದಾವೀದನಿಗೆ, “ನೋಡು, ಫಿಲಿಷ್ಟಿಯರು ಕೆಯೀಲಾದವರ ವಿರುದ್ಧ ಹೋರಾಡುತ್ತಿದ್ದಾರೆ; ಅವರು ಕಣದಿಂದ ಧಾನ್ಯವನ್ನು ಸೂರೆ ಮಾಡುತ್ತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:1
9 ತಿಳಿವುಗಳ ಹೋಲಿಕೆ  

ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು.


ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.


ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.


ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು