1 ಸಮುಯೇಲ 23:14 - ಕನ್ನಡ ಸಮಕಾಲಿಕ ಅನುವಾದ14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದು ಕಡೆಗೆ ಜೀಫ್ ಅರಣ್ಯದ ಪರ್ವತ ಪ್ರಾಂತಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ದಿನಂಪ್ರತಿಯೂ ಅವನನ್ನು ಹುಡುಕುತ್ತಿದ್ದರೂ ದೇವರು ಇವನ ಕೈಗೆ ಒಪ್ಪಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.