Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:23 - ಕನ್ನಡ ಸಮಕಾಲಿಕ ಅನುವಾದ

23 ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:23
14 ತಿಳಿವುಗಳ ಹೋಲಿಕೆ  

ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.


ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.


ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”


ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.


ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;


ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು