Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:27
9 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.


ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.


ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.


ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು