1 ಸಮುಯೇಲ 24:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿ |