Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:13 - ಕನ್ನಡ ಸಮಕಾಲಿಕ ಅನುವಾದ

13 ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ‘ಕೆಟ್ಟಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. “ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:13
8 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


“ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು