Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಅವನು ದಾವೀದನಿಗೆ - ನೀನು ನನಗಿಂತ ನೀತಿವಂತನು; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೇದನ್ನೇ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:17
8 ತಿಳಿವುಗಳ ಹೋಲಿಕೆ  

ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು