Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:2
9 ತಿಳಿವುಗಳ ಹೋಲಿಕೆ  

ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ,


ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.


ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.


ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.


ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.


ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ,


“ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ?


ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು