Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:20 - ಕನ್ನಡ ಸಮಕಾಲಿಕ ಅನುವಾದ

20 ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೇಳು, ನೀನು ಹೇಗೂ ಅರಸನಾಗುವಿಯೆಂದೂ ಇಸ್ರಾಯೇಲ್ ರಾಜ್ಯವು ನಿನ್ನಲ್ಲಿ ಸ್ಥಿರವಾಗುವದೆಂದೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:20
12 ತಿಳಿವುಗಳ ಹೋಲಿಕೆ  

ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ.


ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.


ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು