Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:11 - ಕನ್ನಡ ಸಮಕಾಲಿಕ ಅನುವಾದ

11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:11
16 ತಿಳಿವುಗಳ ಹೋಲಿಕೆ  

ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?


ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ


“ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.


ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.


ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು