1 ಸಮುಯೇಲ 25:13 - ಕನ್ನಡ ಸಮಕಾಲಿಕ ಅನುವಾದ13 ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು. ಅಧ್ಯಾಯವನ್ನು ನೋಡಿ |