Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:23 - ಕನ್ನಡ ಸಮಕಾಲಿಕ ಅನುವಾದ

23 ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:23
12 ತಿಳಿವುಗಳ ಹೋಲಿಕೆ  

ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.


ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.


ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.


ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.


ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.


ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.


ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.


ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.


ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು