Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:28 - ಕನ್ನಡ ಸಮಕಾಲಿಕ ಅನುವಾದ

28 “ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:28
31 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


“ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.


ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


“ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.


ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ,


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.


ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು