1 ಸಮುಯೇಲ 25:34 - ಕನ್ನಡ ಸಮಕಾಲಿಕ ಅನುವಾದ34 ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್‍ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.