Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:6 - ಕನ್ನಡ ಸಮಕಾಲಿಕ ಅನುವಾದ

6 ‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:6
12 ತಿಳಿವುಗಳ ಹೋಲಿಕೆ  

ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


“ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.


ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.


ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:


ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.


ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು