Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:10
23 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.


ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.


ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.


ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.


ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.


“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,” ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,” ಎಂದೂ ಹೇಳಲಾಗಿದೆ.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು