1 ಸಮುಯೇಲ 26:12 - ಕನ್ನಡ ಸಮಕಾಲಿಕ ಅನುವಾದ12 ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಅಧ್ಯಾಯವನ್ನು ನೋಡಿ |