Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:15 - ಕನ್ನಡ ಸಮಕಾಲಿಕ ಅನುವಾದ

15 ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾವೀದನು ಅಬ್ನೇರನಿಗೆ - ನೀನು ಶೂರನಲ್ಲವೋ? ಇಸ್ರಾಯೇಲ್ಯರಲ್ಲಿ ನಿನಗೆ ಸಮಾನರಾರು! ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ? ಜನರಲ್ಲೊಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:15
5 ತಿಳಿವುಗಳ ಹೋಲಿಕೆ  

ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು.


ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.


ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು