Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:19 - ಕನ್ನಡ ಸಮಕಾಲಿಕ ಅನುವಾದ

19 ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:19
32 ತಿಳಿವುಗಳ ಹೋಲಿಕೆ  

ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.


ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.


ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.


“ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.


ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ?


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.


ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು.


ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು