Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:20 - ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯ ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲ್ಯರ ಅರಸನು ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:20
9 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು