Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:21
16 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


ದೇವರ ಭಕ್ತರ ಮರಣವು ಯೆಹೋವ ದೇವರ ದೃಷ್ಟಿಯಲ್ಲಿ ಅಮೂಲ್ಯವಾಗಿದೆ.


ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.


ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ.


ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.


ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.


ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.


ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.


ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು