Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:23
16 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.


“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು