1 ಸಮುಯೇಲ 26:5 - ಕನ್ನಡ ಸಮಕಾಲಿಕ ಅನುವಾದ5 ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರಕ್ಕೆ ಹೋಗಿ, ಸೌಲನು ಹಾಗು ನೇರನ ಮಗನಾದ ಅವನ ಸೇನಾಪತಿ ಅಬ್ನೇರನು ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ಬಂಡಿಗಳನ್ನು ಬಿಡುವ ಸ್ಥಳ ಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ ಸೌಲನೂ ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ಬಂಡಿಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು; ಅವನ ಸುತ್ತಲೂ ಸೈನಿಕರು ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ನೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು. ಅಧ್ಯಾಯವನ್ನು ನೋಡಿ |