Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:8
16 ತಿಳಿವುಗಳ ಹೋಲಿಕೆ  

ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.


ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.


ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.


ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.


ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.


ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.


ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು