Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:1 - ಕನ್ನಡ ಸಮಕಾಲಿಕ ಅನುವಾದ

1 ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:1
29 ತಿಳಿವುಗಳ ಹೋಲಿಕೆ  

“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.


ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.


“ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.


ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.


ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,


ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.


ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.


ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.


ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು