Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:10
21 ತಿಳಿವುಗಳ ಹೋಲಿಕೆ  

ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.


ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.


ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.


ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,


ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ.


ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ.


ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.


ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.


ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.


ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.


“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು.


ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.


ಮತ್ತೆ ಅವನು, “ನೀನು ನನ್ನ ಮಗ ಏಸಾವನೋ?” ಎಂದಾಗ. ಯಾಕೋಬನು, “ನಾನೇ,” ಎಂದನು.


ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.


ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು