1 ಸಮುಯೇಲ 27:12 - ಕನ್ನಡ ಸಮಕಾಲಿಕ ಅನುವಾದ12 ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು. ಅಧ್ಯಾಯವನ್ನು ನೋಡಿ |