Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:2
7 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.


ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.


ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ.


ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು