Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:4 - ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಬೆನ್ನಟ್ಟಿಹೋಗುವುದನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿ ಆಮೇಲೆ ಅವನನ್ನು ಹುಡುಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:4
4 ತಿಳಿವುಗಳ ಹೋಲಿಕೆ  

ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು.


ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.


ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು