Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:6
12 ತಿಳಿವುಗಳ ಹೋಲಿಕೆ  

ಚಿಕ್ಲಗ್, ಮೆಕೋನ ಮತ್ತು ಅವುಗಳ ಗ್ರಾಮಗಳಲ್ಲಿಯೂ,


ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,


ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.


ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ.


ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;


ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,


ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಚಿಕ್ಲಗ್, ಬೇತ್ ಮರ್ಕಾಬೋತ್, ಹಚರ್‌ಸೂಸಾ,


ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು