Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ - ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂದು ನಿನಗೆ ಗೊತ್ತಿರುತ್ತದಲ್ಲವೋ ಎನ್ನಲು ದಾವೀದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:1
7 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.


ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು,


ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು