1 ಸಮುಯೇಲ 28:16 - ಕನ್ನಡ ಸಮಕಾಲಿಕ ಅನುವಾದ16 ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ? ಅಧ್ಯಾಯವನ್ನು ನೋಡಿ |
ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.