Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿವಸ ಊಟ ಮಾಡಿರಲಿಲ್ಲವಾದದರಿಂದ ಅವನಲ್ಲಿ ಬಲವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:20
7 ತಿಳಿವುಗಳ ಹೋಲಿಕೆ  

“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?


ಸೌಲನು ಫಿಲಿಷ್ಟಿಯರ ಸೈನ್ಯವನ್ನು ಕಂಡು ಭಯಪಟ್ಟನು. ಆತನ ಹೃದಯದಲ್ಲಿ ಭಯತುಂಬಿತು.


ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.


ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು