1 ಸಮುಯೇಲ 28:21 - ಕನ್ನಡ ಸಮಕಾಲಿಕ ಅನುವಾದ21 ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ. ಅಧ್ಯಾಯವನ್ನು ನೋಡಿ |