Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದುದರಿಂದ ಈಗ ನೀವು ದಯವಿಟ್ಟು ನಿಮ್ಮ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ಈಗ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು; ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:22
2 ತಿಳಿವುಗಳ ಹೋಲಿಕೆ  

ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.


ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು