Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:24 - ಕನ್ನಡ ಸಮಕಾಲಿಕ ಅನುವಾದ

24 ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು ಪಕ್ವಮಾಡಿ ಹಿಟ್ಟನ್ನು ತೆಗೆದುಕೊಂಡು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:24
5 ತಿಳಿವುಗಳ ಹೋಲಿಕೆ  

ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ.


ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.


ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.


ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು