Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:5 - ಕನ್ನಡ ಸಮಕಾಲಿಕ ಅನುವಾದ

5 ಸೌಲನು ಫಿಲಿಷ್ಟಿಯರ ಸೈನ್ಯವನ್ನು ಕಂಡು ಭಯಪಟ್ಟನು. ಆತನ ಹೃದಯದಲ್ಲಿ ಭಯತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫಿಲಿಷ್ಟಿಯರ ಪಾಳೆಯವನ್ನು ಕಂಡಾಗ ಭಯಭೀತಿಯಿಂದ ಅವನ ಎದೆಯೊಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:5
11 ತಿಳಿವುಗಳ ಹೋಲಿಕೆ  

ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು