Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:7
13 ತಿಳಿವುಗಳ ಹೋಲಿಕೆ  

ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.


ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು