Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:9 - ಕನ್ನಡ ಸಮಕಾಲಿಕ ಅನುವಾದ

9 ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಆಕೆಯು ಅವನಿಗೆ - ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ; ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವದೇಕೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:9
5 ತಿಳಿವುಗಳ ಹೋಲಿಕೆ  

ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು