Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:1 - ಕನ್ನಡ ಸಮಕಾಲಿಕ ಅನುವಾದ

1 ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:1
20 ತಿಳಿವುಗಳ ಹೋಲಿಕೆ  

ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.


ಅಫೇಕದ ಅರಸನು. ಲಷ್ಷಾರೋನಿನ ಅರಸನು.


ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.


ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.


“ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’


ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,


ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,


ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.


ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು