10 ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.
ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.