Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:11 - ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಜೆಸ್ರೀಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ದಾವೀದನು ಮತ್ತು ಅವನ ಜನರು ಮಾರನೆಯ ದಿನ ಬೆಳಿಗ್ಗೆ ಬೇಗನೆ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿ ಹೋದರು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:11
7 ತಿಳಿವುಗಳ ಹೋಲಿಕೆ  

ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.


ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.


ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,


ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,


ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು