1 ಸಮುಯೇಲ 29:8 - ಕನ್ನಡ ಸಮಕಾಲಿಕ ಅನುವಾದ8 ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |