Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಸಮುವೇಲನಿಗೆ - ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷ ಕಾರ್ಯವನ್ನು ನಡಿಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:11
11 ತಿಳಿವುಗಳ ಹೋಲಿಕೆ  

“ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.


“ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.


‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.


ಇಸ್ರಾಯೇಲಿನ ಯೆಹೋವ ದೇವರಾದ ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳು ಕಿರಗುಟ್ಟುವುವು.


ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.


ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು