Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:12
11 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’


ಇಸ್ರಾಯೇಲರ ಕೈ ಕಾನಾನ್ಯರ ಅರಸನಾದ ಯಾಬೀನನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯಹೊಂದಿತು.


ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.


ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು.


ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.


ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು