Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:3 - ಕನ್ನಡ ಸಮಕಾಲಿಕ ಅನುವಾದ

3 ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:3
10 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.


ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು.


“ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.


ಅವರು ಶೀಲೋವಿನಲ್ಲಿ ಊಟಮಾಡಿದ ತರುವಾಯ ಹನ್ನಳು ಎದ್ದು ನಿಂತಳು. ಯಾಜಕನಾದ ಏಲಿ ಯೆಹೋವ ದೇವರ ಮಂದಿರದ ಸ್ತಂಭದ ಬಳಿ ಆಸನದ ಮೇಲೆ ಕುಳಿತಿರುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು