1 ಸಮುಯೇಲ 3:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಮತ್ತೆ ಮೂರನೆಯ ಸಾರಿ, “ಸಮುಯೇಲನೇ,” ಎಂದು ಕರೆದರು. ಅವನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಆಗ ಏಲಿಯು, ಯೆಹೋವ ದೇವರು ಹುಡುಗನನ್ನು ಕರೆದರೆಂದು ಗ್ರಹಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ - ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ ಅನ್ನಲು ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ - ಹೋಗಿ ಮಲಗಿಕೋ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು. ಅಧ್ಯಾಯವನ್ನು ನೋಡಿ |