Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:12 - ಕನ್ನಡ ಸಮಕಾಲಿಕ ಅನುವಾದ

12 ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷೇಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:12
9 ತಿಳಿವುಗಳ ಹೋಲಿಕೆ  

ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.


ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.


ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು