Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:21
7 ತಿಳಿವುಗಳ ಹೋಲಿಕೆ  

ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.


ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.


ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.


ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.


ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು