Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯ್ದವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:24
7 ತಿಳಿವುಗಳ ಹೋಲಿಕೆ  

“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.


ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.


ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?


ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು